ಧಗಧಗಿಸಿದ ಕಾರು : ನಿಂತ ವಾಹನಕ್ಕೆ ಬೆಂಕಿ ಇಟ್ಟ ದುಷ್ಕರ್ಮಿಗಳು - ಬೆಂಗಳೂರು
ಮನೆಯ ಮುಂದೆ ನಿಲ್ಲಿಸಿದ್ದ ಇನ್ನೋವಾ ಕ್ರಿಸ್ಟಾ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಪರಿಣಾಮ ಕಾರು ಸಂಪೂರ್ಣವಾಗಿ ಅಗ್ನಿಗಾಹುತಿ ಆಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹನಿಯೂರು ಗ್ರಾಮದಲ್ಲಿ ನಡೆದಿದೆ. ಹನಿಯೂರು ಗ್ರಾಮದ ಓಂಕಾರ ಮಹಾದೇವಿ ಆಶ್ರಮದ ಅರ್ಚಕ ಅವಲಪ್ಪಚಾರ್ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ರಾತ್ರಿ 12.30ರ ಸುಮಾರಿಗೆ ಕಿಡಿಗೇಡಿಗಳು ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.