ಬಾಗಲಕೋಟೆಯಲ್ಲಿ ಮತ್ತೆ ಪ್ರವಾಹ ಭೀತಿ: ಆತಂಕದಲ್ಲಿ ಜನ - ನವಿಲುತೀರ್ಥ ಜಲಾಶಯ
ಬೆಳಗಾವಿ: ಜಿಲ್ಲೆಯ ನವಿಲುತೀರ್ಥ ಜಲಾಶಯದಿಂದ ಸಾಕಷ್ಟು ಪ್ರಮಾಣದಲ್ಲಿ ನದಿಗಳಿಗೆ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಅಲ್ಲದೆ, ಬಾದಾಮಿ ತಾಲೂಕಿನಲ್ಲಿ ಮಲಪ್ರಭಾ ನದಿಯಲ್ಲಿ ಹರಿವಿನ ಪ್ರಮಾಣ ಅಧಿಕವಾಗಿದ್ದು, ನದಿ ತೀರದ ಗ್ರಾಮಗಳು ಮುಳುಗುವ ಪರಿಸ್ಥಿತಿಯಿದೆ. ಬಾದಾಮಿಯ ಧಾರ್ಮಿಕ ಕ್ಷೇತ್ರ ಶಿವಯೋಗಮಂದಿರ ಬಳಿಯಿರುವ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ಇದರಿಂದ ಮಂಗಳೂರು, ಹೊಸೂರು, ಶಿರಬಡಗಿ, ಗೋನಾಳ ಸೇರಿದಂತೆ ಹಲವು ಗ್ರಾಮಗಳಿಗೆ ಸಂಚಾರ ಸ್ಥಗಿತಗೊಂಡಿದೆ. ಇತ್ತೀಚೆಗೆ ಸುರಿದ ಭಾರೀ ಮಳೆಗೆ ಶಿವಯೋಗ ಮಂದಿರದೊಳಕ್ಕೂ ನೀರು ಹೋಗಿತ್ತು. ಅಲ್ಲಿ ಗೋಶಾಲೆ ಸೇರಿದಂತೆ ಇತರ ಕಟ್ಟಡಗಳಿಗೆ ಹಾನಿಯಾಗಿತ್ತು. ಈಗ ಮತ್ತೆ ಪ್ರವಾಹದಿಂದ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.