ಮಾಸ್ಕ್ ಹಾಕಿಕೊಳ್ಳಿ ಅಂತ ಹೇಳಿದ್ದಷ್ಟೇ.. ಪೊಲೀಸರನ್ನೇ ತರಾಟೆಗೆ ತೆಗೆದುಕೊಂಡ ಹೂ ವ್ಯಾಪಾರಿಗಳು : ವಿಡಿಯೋ ವೈರಲ್ - Flower traders in the market speak aganist police
ಮೈಸೂರು : ನಗರದ ದೇವರಾಜ ಮಾರುಕಟ್ಟೆಯಲ್ಲಿ ಗುರುವಾರ ಹೂ ವ್ಯಾಪಾರಿಗಳಿಗೂ ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ಪೊಲೀಸರು ಮಾಸ್ಕ್ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಹೂ ವ್ಯಾಪಾರಿಯು ಮಾಸ್ಕ್ ಧರಿಸಿರಲಿಲ್ಲ. ಹೀಗಾಗಿ, ಪೊಲೀಸರು ಆತನಿಗೆ ದಂಡ ಹಾಕಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಮತ್ತು ಹೂ ವ್ಯಾಪಾರಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.