ದಸರಾ ಪ್ರಯುಕ್ತ ಸಾರ್ವಜನಿಕ ಜಾನಪದ ಗೀತೆ ಗಾಯನ, ನೃತ್ಯ ಸ್ಪರ್ಧೆ - folk song and dance program
ತುಮಕೂರು: ದಸರಾ ಸಮಿತಿ ಹಾಗೂ ಸಂಸ್ಕಾರ ಭಾರತಿ ವತಿಯಿಂದ ನಗರದ ಸರ್ಕಾರಿ ಜೂನಿಯರ್ ಕಾಲೇಜ್ ಮೈದಾನದಲ್ಲಿ ಸೋಮವಾರ ಸಾರ್ವಜನಿಕ ಜಾನಪದ ಗೀತೆ ಗಾಯನ ಸ್ಪರ್ಧೆ ಹಾಗೂ ನೃತ್ಯ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಶಾಲಾ ಮಕ್ಕಳು ಹಾಗೂ ಹವ್ಯಾಸಿ ತಂಡಗಳ ಸದಸ್ಯರು ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಮೂಲಕ ದೇಶದ ಸಂಸ್ಕೃತಿಯನ್ನು ಎತ್ತಿ ಹಿಡಿದರು.