ಪಕ್ಷ ಸಂಘಟನೆಗೆ ಪಣ: ಜ. 31ರಂದು ಬಾಗಲಕೋಟೆಗೆ ಮಾಜಿ ಸಿಎಂ ಹೆಚ್ಡಿಕೆ ಆಗಮನ - ಬಾಗಲಕೋಟೆ ಜೆಡಿಎಸ್ ಸಮಾವೇಶ
ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ಸಂಘಟನೆ ಮಾಡುವ ನಿಟ್ಟಿನಲ್ಲಿ ಜನವರಿ 31ರಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಾಗಲಕೋಟೆ ನಗರಕ್ಕೆ ಆಗಮಿಸಲಿದ್ದಾರೆ. ಅಂದು ನವನಗರದ ಕಾಳಿದಾಸ ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಭಾಗವಹಿಸಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಯ ಗಳಿಸಿದ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಿಗೆ ಸನ್ಮಾನ ಮಾಡಲಿದ್ದಾರೆ. ಅಂದು ಹಲವಾರು ಜನರು ಬಿಜೆಪಿ, ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಗೊಳ್ಳಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ತಿಳಿಸಿದರು.