ಧಾರವಾಡದ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಸಿದ್ದರಾಮಯ್ಯ - ಮಾಜಿ ಸಿಎಂ ಸಿದ್ದರಾಮಯ್ಯ,
ದಾವಣಗೆರೆ: ಧಾರವಾಡದಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವಿಗೀಡಾದವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದರು. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಬಳಿ ಇರುವ ಪಂಚಮಸಾಲಿ ಪೀಠದಲ್ಲಿ ನಡೆಯುತ್ತಿರುವ ಹರ ಜಾತ್ರೆಗೆ ತೆರಳುವ ಮುನ್ನ ಮಾತನಾಡಿದ ಅವರು ದಾವಣಗೆರೆಯಿಂದ ಗೋವಾಕ್ಕೆ ಪ್ರವಾಸಕ್ಕಾಗಿ ತೆರಳುತ್ತಿರುವ ವೇಳೆ ಅಪಘಾತ ಆಗಿರುವುದು ದುಃಖದ ಸಂಗತಿ. ದಾವಣಗೆರೆ ಮೂಲದವರು 11 ಜನ ಸಾವನ್ನಪ್ಪಿದ್ದು, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದರು. ಇನ್ನು ಅ ದುರಂತದಲ್ಲಿ ಸಾವಿಗೀಡಾದ 11 ಜನ್ರ ಆತ್ಮಕ್ಕೆ ಶಾಂತಿ ಸಿಗಲಿ ಎಂದರು.