ಪತ್ನಿ ಸಮೇತ ಮತಗಟ್ಟೆಗೆ ಬಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮತದಾನ - Mandya
2ನೇ ಹಂತದ ಗ್ರಾ.ಪಂ ಚುನಾವಣೆ ಹಿನ್ನೆಲೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮತದಾನ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರುಳಿ ಗ್ರಾಮದಲ್ಲಿ ಪತ್ನಿ ಸಮೇತರಾಗಿ ಮತಗಟ್ಟೆಗೆ ಬಂದು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ನಂತರ ಮಾಧ್ಯಮಗಳೊಂದಿಗೆ ಜೆಡಿಎಸ್ ವಿಲೀನ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಕಷ್ಟ ಪಟ್ಟು ಕಟ್ಟಿದ ಪಕ್ಷ ವಿಲೀನಕ್ಕೆ ಹೆಚ್.ಡಿ. ದೇವೇಗೌಡರು ನಿರಾಕರಿಸಿದ್ದಾರೆ. ನಾನು ಪ್ರಧಾನಿಯಾಗಲು ಅವಕಾಶ ಮಾಡಿಕೊಟ್ಟ ಈ ಪಕ್ಷವನ್ನು ಯಾವುದೇ ಕಾರಣಕ್ಕೂ ವಿಲೀನ ಮಾಡುವುದಿಲ್ಲ ಎಂದು ಅವರು ನಿನ್ನೆ ಸ್ಪಷ್ಟನೆ ನೀಡಿದ್ದಾರೆ. ಈಗಾಗಿ ಯಾವುದೇ ವಿಲೀನವಿಲ್ಲ ಎಂದು ತಿಳಿಸಿದರು.