ಪ್ರಜ್ಞಾ ಸಿಂಗ್, ಪ್ರಹ್ಲಾದ್ ಜೋಶಿ ವಿರುದ್ಧ ಮಾಜಿ ಸಚಿವ ಕಿಡಿ - ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ್
ಧಾರವಾಡ: ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ್ ಸವಾಲು ಹಾಕಿದ್ದಾರೆ. ಇಂದು ನಗರದ ಸರ್ಕಿಟ್ ಹೌಸ್ನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಗಾಂಧೀಜಿ ತತ್ವವನ್ನು ಒಪ್ಪಿಕೊಳ್ಳುವುದಾದ್ರೆ ಸಾದ್ವಿ ಪ್ರಜ್ಞಾ ಸಿಂಗ್ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಬಿಜೆಪಿಯಿಂದ ಹೊರಹಾಕಲಿ ಎಂದು ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್ ಸವಾಲು ಹಾಕಿದ್ದಾರೆ. ಇದೇ ವೇಳೆ ಅನರ್ಹ ಶಾಸಕರು ವಿರುದ್ಧವೂ ಅವರು ಕಿಡಿಕಾರಿದ್ದಾರೆ.