ಶಿವಮೊಗ್ಗದಲ್ಲಿ ಇಂದಿನಿಂದ ನಾಲ್ಕು ದಿನ ಸಂಪೂರ್ಣ ಲಾಕ್ಡೌನ್.. ಜನರಿಂದ ಮಿಶ್ರ ಪ್ರತಿಕ್ರಿಯೆ - ಶಿವಮೊಗ್ಗದಲ್ಲಿ ನಾಲ್ಕು ದಿನದ ಸಂಪೂರ್ಣ ಲಾಕ್ಡೌನ್ಗೆ ಮಿಶ್ರ ಪ್ರತಿಕ್ರಿಯೆ
ಶಿವಮೊಗ್ಗ: ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವುದರಿಂದ ರಾಜ್ಯ ಸರ್ಕಾರ 14 ದಿನಗಳ ಕಾಲ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿ ಮಾಡಿದೆ. ಈ ಮಧ್ಯೆ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇಂದಿನಿಂದ ನಾಲ್ಕು ದಿನ ಸಂಪೂರ್ಣ ಲಾಕ್ಡೌನ್ ಜಾರಿ ಮಾಡಿ ಆದೇಶ ಹೊರಡಿಸಿದೆ. ಸಂಪೂರ್ಣ ಲಾಕ್ಡೌನ್ಗೆ ಜಿಲ್ಲೆಯ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಕುರಿತು ಗ್ರೌಂಡ್ ರಿಪೋರ್ಟ್.