ಅರಕಲಗೂಡಿನಲ್ಲಿ ಕಾರ್ಮಿಕರಿಗೆ ಉಚಿತ ಕೋವಿಡ್ ಟೆಸ್ಟ್ - Arakkalagudu Covid test news
ಅರಕಲಗೂಡು (ಹಾಸನ): ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಉಚಿತವಾಗಿ ಕೋವಿಡ್ ಟೆಸ್ಟ್ ನೆಡೆಸಲಾಗುತ್ತಿದೆ. ಕೋವಿಡ್ ರೋಗ ರಾಜ್ಯಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಮಾರುಕಟ್ಟೆಗಳು, ಹೋಟೆಲ್‍ಗಳು ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಸರ್ಕಾರದ ನಿರ್ದೇಶನದಂತೆ ಉಚಿತವಾಗಿ ಕೋವಿಡ್ ಟೆಸ್ಟ್ ನೆಡೆಸಲಾಗುತ್ತಿದೆ. ಪ್ರತಿಯೊಬ್ಬರು ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಧರಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಸ್ವಾಮಿಗೌಡ ಮನವಿ ಮಾಡಿದರು.