ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನ; ಹುಬ್ಬಳ್ಳಿಯಲ್ಲಿ ಬೃಹತ್ ಮೆರವಣಿಗೆ - ಸಂಗೊಳ್ಳಿ ರಾಯಣ್ಣ ಹುತ್ಮಾತ ದಿನ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹುತಾತ್ಮ ದಿನದ ಸ್ಮರಣಾರ್ಥವಾಗಿ ಇಂದು ಹುಬ್ಬಳ್ಳಿಯಲ್ಲಿ ಬೃಹತ್ ಪಾದಯಾತ್ರೆ ಮೆರವಣಿಗೆಯನ್ನು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮೂಜಗು ಸ್ವಾಮೀಜಿ ಚಾಲನೆ ನೀಡಿದರು. ನಗರದ ದುರ್ಗದಬೈಲ್ ದಿಂದ ಸಂಗೊಳ್ಳಿ ರಾಯಣ್ಣನ ವೃತ್ತದವರೆಗೆ ಪಾದಯಾತ್ರೆ ಮೂಲಕ ತೆರಳಿ ರಾಯಣ್ಣನ ಪುತ್ಥಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸುರೇಶ ಗೋಕಾಕ್, ಮೂಜಗು ಸ್ವಾಮೀಜಿ, ಚಂದ್ರಶೇಖರ ಗೋಕಾಕ್ ಸೇರಿದಂತೆ ನೂರಾರು ಅಭಿಮಾನಿಗಳು ಇದ್ದರು.