ಸಂಡೇ ಲಾಕ್ಡೌನ್ಗೆ ಬೀದರ್ನಲ್ಲಿ ಉತ್ತಮ ಪ್ರತಿಕ್ರಿಯೆ - bidar lackdown news
ಕೋವಿಡ್-19 ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭಾನುವಾರದ ಲಾಕ್ಡೌನ್ಗೆ ಗಡಿ ಜಿಲ್ಲೆ ಬೀದರ್ನಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ನಗರದ ಪ್ರಮುಖ ರಸ್ತೆಗಳು ಜನ ಸಂಚಾರವಿಲ್ಲದೆ ಬಿಕೋ ಎನ್ನುತ್ತಿವೆ. ಬೆಳಿಗ್ಗೆಯಿಂದಲೂ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವ ಮೂಲಕ ವ್ಯಾಪಾರ, ವಹಿವಾಟು, ಸಾರಿಗೆ ಸಂಚಾರ, ಆಟೋ, ಟ್ಯಾಕ್ಸಿ ಓಡಾಟ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಗೆ ತರುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿದೆ.