ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಉದಾಸಿ: ಮೂಲ ಸೌಕರ್ಯಕ್ಕೆ ತಾಕೀತು! - ಗದಗ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ
ಸಂಸದ ಶಿವಕುಮಾರ ಉದಾಸಿ ನೇತೃತ್ವದಲ್ಲಿ ಗದಗ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು. ಗದಗ ಜಿಲ್ಲಾಡಳಿತ ಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿದ್ದಲಿಂಗೇಶ್ವರ ಪಾಟೀಲ್ ಹಾಗೂ ಜಿ.ಪಂ ಮುಖ್ಯಾಧಿಕಾರಿಗಳ ಬಳಿ ಸಂಸದರು ಜಿಲ್ಲೆಯ ಕುಂದುಕೊರತೆ, ಕುಂಠಿತಗೊಂಡ ಅಭಿವೃದ್ಧಿ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಪಡೆದರು. ನಂತರ ನೆರೆ ಸಂತ್ರಸ್ತರಿಗೆ ಕುಡಿಯುವ ನೀರು, ರಸ್ತೆ, ವಿದ್ಯುತ್ ಸೌಲಭ್ಯ ಸೇರಿದಂತೆ ಮೂಲ ಸೌಕರ್ಯಗಳನ್ನ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ, ಕೆಲ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ವಿಳಂಬ ಹಾಗೂ ಸ್ಥಳ ಪರಿಶೀಲನೆ ಮಾಡದಿರುವ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು.