ಹಾಸ್ಟೆಲ್ನಲ್ಲಿ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿ - ಎಬಿವಿಪಿ ಕಾರ್ಯಕರ್ತರು
ಕೊಪ್ಪಳ: ನಗರದ ಬಿಸಿಎಂ ಹಾಸ್ಟೆಲ್ನಲ್ಲಿ ಐವರು ವಿದ್ಯಾರ್ಥಿಗಳು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದು, ಈ ಹಿನ್ನೆಲೆಯಲ್ಲಿ ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಗರದ ಬಸವೇಶ್ವರ ಸರ್ಕಲ್ನಲ್ಲಿ ಎಬಿವಿಪಿ ಕಾರ್ಯಕರ್ತರು ಮೇಣದ ಬತ್ತಿ ಬೆಳಗಿ ಶ್ರದ್ಧಾಂಜಲಿ ಸಲ್ಲಿಸಿದ್ದು, ಅಧಿಕಾರಿಗಳ ಹಾಗೂ ಹಾಸ್ಟೆಲ್ ವಾರ್ಡನ್ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು. ಈ ವೇಳೆ ಬಿಜೆಪಿ ಮುಖಂಡರಾದ ಅಮರೇಶ ಕರಡಿ, ಬಸವರಾಜ ವಣಗೇರಿ, ಎಬಿವಿಪಿ ಮುಖಂಡರಾದ ರವಿಚಂದ್ರ, ಮಲ್ಲಪ್ಪವಣಗೇರಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.