ಭೂ ವಿಜ್ಞಾನಿಗಳಿಂದ ದೇವಿರಮ್ಮ ಬೆಟ್ಟ ವೀಕ್ಷಣೆ.. ರಾತ್ರಿ ಬೆಟ್ಟ ಏರದಂತೆ ಸೂಚನೆ - ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿರುವ ದೇವಿರಮ್ಮ ಬೆಟ್ಟ
ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿರುವ ದೇವಿರಮ್ಮ ಬೆಟ್ಟವನ್ನು ಭೂ ವಿಜ್ಞಾನಿಗಳು ವೀಕ್ಷಣೆ ಮಾಡಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ವರ್ಷಕ್ಕೊಮ್ಮೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುವ ಭಕ್ತರು ಬರಿಗಾಲಿನಲ್ಲಿ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆಯುತ್ತಾರೆ. ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಬೆಳಗ್ಗೆಯಿಂದಲೇ ಭೂ ವಿಜ್ಞಾನಿಗಳ ತಂಡ ಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಟ್ಟ ಹತ್ತಲು 50 ಸಾವಿರಕ್ಕೂ ಅಧಿಕ ಭಕ್ತರು ಬರುವ ನಿರೀಕ್ಷೆ ಇದೆ. ರಾತ್ರಿ ಸಮಯದಲ್ಲಿ ಬೆಟ್ಟ ಹತ್ತದಂತೆ ಈಗಾಗಲೇ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ನಾಳೆ ಬೆಳಗ್ಗೆ 4 ಗಂಟೆಯಿಂದ ಭಕ್ತರಿಗೆ ದೇವಿರಮ್ಮ ಬೆಟ್ಟ ಹತ್ತಲು ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ.