ಕರ್ನಾಟಕ

karnataka

ETV Bharat / videos

3 ಲಕ್ಷ ಮಾತ್ರೆ, 10 ಸಾವಿರ ಮಾಸ್ಕ್‌, 2 ಸಾವಿರ ಸ್ಯಾನಿಟೈಸರ್‌: ವಿಶೇಷ ಅಲಂಕಾರದ ಮೂಲಕ ಕೊರೊನಾ ಜಾಗೃತಿ - ಬೆಂಗಳೂರಿನ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ ಕೊರೊನಾ ಜಾಗೃತಿ ಅಲಂಕಾರ

By

Published : Jul 24, 2021, 10:44 PM IST

ಬೆಂಗಳೂರು: ಗುರುಪೂರ್ಣಿಮೆ ಅಂಗವಾಗಿ ಇಂದು ಜೆಪಿ ನಗರದ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ 3 ಲಕ್ಷ ಮಾತ್ರೆ, 10 ಸಾವಿರ ಮಾಸ್ಕ್‌, 2 ಸಾವಿರ ಸ್ಯಾನಿಟೈಸರ್‌ ಬಳಸಿ ವಿಶೇಷ ಅಲಂಕಾರ ಮಾಡಿರುವುದನ್ನ ಕಂಡು ಭಕ್ತಾದಿಗಳು ಪುಳಕಿತರಾದರು. ಕೊರೊನಾ ಮೂರನೇ ಅಲೆಯ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಮಾತ್ರೆಗಳನ್ನು ಬಳಸಿ ಅಲಂಕಾರ ಮಾಡಲಾಗಿತ್ತು. ಈ ವಿಶೇಷ ಅಲಂಕಾರವನ್ನು ಕಂಡು ಸಂಸದ ತೇಜಸ್ವಿ ಸೂರ್ಯ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಇಂತಹ ವಿಭಿನ್ನ ಆಲೋಚನೆಯಿಂದಾಗಿ ಅಲಂಕಾರದ ಸದುಯೋಗ ಆಗುತ್ತದೆ. ಈ ನಿಟ್ಟಿನಲ್ಲಿ ವಿಭಿನ್ನ ಆಲೋಚನೆ ಮಾಡಿರುವ ಮಾಜಿ ಉಪಮಹಾಪೌರರಾದ ರಾಮ ಮೋಹನ ರಾಜ್‌ ಅವರ ಕಾರ್ಯ ಶ್ಲಾಘನೀಯ ಎಂದು ತೇಜಸ್ವಿ ಸೂರ್ಯ ಪ್ರಶಂಸಿದ್ದಾರೆ.

For All Latest Updates

TAGGED:

ABOUT THE AUTHOR

...view details