ಹಾವೇರಿಯಲ್ಲಿ ಲಾಕ್ಡೌನ್ಗೆ ಉತ್ತಮ ಪ್ರತಿಕ್ರಿಯೆ: ಸಾಮಾಜಿಕ ಅಂತರಕ್ಕೆ ಜನರ ಮನ್ನಣೆ - ಹಾವೇರಿ ಕೊರೊನಾ ಸುದ್ದಿ
ಕೊರೊನಾ ಸೋಂಕು ಹರಡುವಿಕೆ ತಡೆಯಲು ಕರೆ ನೀಡಿರೋ ಭಾರತ ಲಾಕ್ ಡೌನ್ಗೆ ಹಾವೇರಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ಬಹುತೇಕ ಅಂಗಡಿಗಳು ಬಂದ್ ಆಗಿವೆ. ಜಿಲ್ಲಾಡಳಿತದ ಆದೇಶದ ಮೇರೆಗೆ ಕೆಲ ಅಗತ್ಯ ವಸ್ತುಗಳ ಅಂಗಡಿಗಳು ಮಾತ್ರ ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಹಾಲು ಮತ್ತು ಔಷಧಿ ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬ ಜಿಲ್ಲಾಡಳಿತದ ನಿರ್ದೇಶನಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಜನರು ಮೂರ್ನಾಲ್ಕು ಅಡಿ ಅಂತರದಲ್ಲಿ ನಿಂತು ಖರೀದಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಬಹುತೇಕರು ಮಾಸ್ಕ್ ಧರಿಸಿ ಖರೀದಿ ಪ್ರಕ್ರಿಯೆಯಲ್ಲಿ ತೊಡಗಿದ್ದು ಕಂಡುಬಂತು.