ಹಾವೇರಿಯಲ್ಲಿ ಲಾಕ್ಡೌನ್ಗೆ ಉತ್ತಮ ಸ್ಪಂದನೆ - corona virus
ಹಾವೇರಿ: ಕೊರೊನಾ ಸೋಂಕು ಹರಡುವುದನ್ನ ತಡೆಯಲು ಕರೆ ನೀಡಲಾಗಿರುವ ಭಾರತ ಲಾಕ್ಡೌನ್ಗೆ ಹಾವೇರಿಯಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ತರಕಾರಿ ಮಾರುಕಟ್ಟೆ, ದಿನಸಿ ಅಂಗಡಿಗಳು ಸೇರಿದಂತೆ ಬಹುತೇಕ ಕಡೆಗಳಲ್ಲಿ ಜನರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ತಿದ್ದಾರೆ. ನಗರದ ತರಕಾರಿ ಮಾರುಕಟ್ಟೆಯಲ್ಲೂ ಸಹ ವ್ಯಾಪಾರಸ್ಥರು ತಮ್ಮ ತಮ್ಮ ಅಂಗಡಿಗಳ ಮುಂದೆ ಬಾಕ್ಸ್ ಗಳನ್ನ ಹಾಕಿ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದಾರೆ.