ಹಾವೇರಿ ಜಿಲ್ಲೆಯಾದ್ಯಂತ ಸಂಭ್ರಮದ ಗೌರಿ ಗಣೇಶ ಹಬ್ಬ ಆಚರಣೆ - ಗಣೇಶನಿಗೆ ವಿಶೇಷ ಪೂಜೆ
ಹಾವೇರಿ ಜಿಲ್ಲೆಯಾದ್ಯಂತ ಸಂಭ್ರಮದಿಂದ ಗೌರಿ ಗಣೇಶ ಹಬ್ಬ ಆಚರಿಸಲಾಗುತ್ತಿದೆ. ಮುಂಜಾನೆಯಿಂದಲೇ ಭಕ್ತರು ಗಣೇಶ ಮಾರಾಟ ಕೇಂದ್ರಳಿಗೆ ತೆರಳಿ ವಿನಾಯಕ ಮೂರ್ತಿಗಳನ್ನು ಕೊಂಡೊಯ್ಯುತ್ತಿದ್ದ ದೃಶ್ಯ ಕಂಡುಬಂತು. ವಿಶೇಷ ಪೂಜೆ ಸಲ್ಲಿಸಿ ಪಟಾಕಿ ಸಿಡಿಸಿ ಗಣೇಶನನ್ನ ವಿಜೃಂಭಣೆಯಿಂದ ತೆಗೆದುಕೊಂಡು ಹೋಗಲಾಯಿತು. ಇನ್ನು ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿಸುವ ವಿನಾಯಕನನ್ನ ಜಾಂಜ್ ಬಾರಿಸಿ ಗುಲಾಲ್ ಎರಚಿ ಮೆರವಣಿಗೆಯಲ್ಲಿ ಒಯ್ಯಲಾಯಿತು. ಇನ್ನು, ಹಬ್ಬದ ಹಿನ್ನೆಲೆಯಲ್ಲಿ ಗಣೇಶ ದೇವಸ್ಥಾನಗಳಿಗೆ ವಿಶೇಷ ಅಲಂಕಾರ ಮಾಡಿ ಗಣೇಶನಿಗೆ ವಿಶೇಷ ಪೂಜೆ, ಅಭಿಷೇಕ ಸಲ್ಲಿಸಲಾಯಿತು.