ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್ಗೆ ಗುದ್ದಿದ ಬಸ್.. 20ಕ್ಕೂ ಅಧಿಕ ಮಂದಿಗೆ ಗಾಯ - ರಸ್ತೆ ಅಪಘಾತ
ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆ ಬಸ್ವೊಂದು ಡಿಪೋದ ಕಾಂಪೌಂಡ್ಗೆ ಗುದ್ದಿದ ಘಟನೆ ಗದಗ ಜಿಲ್ಲೆ ರೋಣ ಪಟ್ಟಣದಲ್ಲಿ ನಡೆದಿದೆ. ಗದಗದಿಂದ ಬಾಗಲಕೋಟೆಗೆ ಹೊರಟಿದ್ದ ಬಸ್ ಇದಾಗಿದ್ದು, ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ರೋಣ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅತಿಯಾದ ವೇಗದಿಂದ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.