ಚಿಕಿತ್ಸೆ ನೀಡಲು ನಕಾರ :ಸಿಬ್ಬಂದಿ ವಿರುದ್ಧ ತಿರುಗಿಬಿದ್ದ ಜನ
ಗುಡಿಬಂಡೆ: ಹೊರ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ ಆರೋಗ್ಯ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಗುಡಿಬಂಡೆ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ವೃದ್ದರು, ಮಹಿಳೆಯರು, ಮಕ್ಕಳು ಸೇರಿದಂತೆ ಮುಂತಾದವರು ಆರೋಗ್ಯ ಸಮಸ್ಯೆಯ ಬಗ್ಗೆ ತೋರಿಸಿಕೊಳ್ಳಲು ಆಸ್ಪತ್ರೆಗೆ ಬಂದಾಗ ಆರೋಗ್ಯ ಸಿಬ್ಬಂದಿ ಹಾಗೂ ಅಧಿಕಾರಿಗಳು ಚಿಕಿತ್ಸೆ ನೀಡಲು ನಿರಾಕರಿಸಿದ್ದು, ಚಿಕಿತ್ಸೆಗಾಗಿ ರೋಗಿಗಳು ಪರದಾಡಿದ್ದಾರೆ. ಇದೇ ವೇಳೆ ಆರೋಗ್ಯ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ತಿರುಗಿ ಬಿದ್ದಿದ್ದಾರೆ.