ತಾಳಿಕೋಟೆಯಲ್ಲಿ ಗ್ರಾಮ ಸ್ವರಾಜ್ ಸಮಾವೇಶಕ್ಕೆ ಡಿಸಿಎಂ ಕಾರಜೋಳ ಚಾಲನೆ - ಡಿಸಿಎಂ ಗೋವಿಂದ ಕಾರಜೋಳ
ಮುದ್ದೇಬಿಹಾಳ (ವಿಜಯಪುರ): ತಾಲೂಕಿನ ತಾಳಿಕೋಟೆ ಪಟ್ಟಣದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಗ್ರಾಮ ಸ್ವರಾಜ್ ಸಮಾವೇಶಕ್ಕೆ ಡಿಸಿಎಂ ಗೋವಿಂದ ಕಾರಜೋಳ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕೋವಿಡ್ ಸಂಕಷ್ಟದಲ್ಲಿ ತೊಂದರೆಗೊಳಗಾದ ಬೀದಿಬದಿ ವ್ಯಾಪಾರಸ್ಥರು, ಚಮ್ಮಾರರು, ಬೂಟ್ ಪಾಲಿಶ್ ಮಾಡುವವರೂ ಸೇರಿದಂತೆ ಶ್ರಮಿಕ ವರ್ಗಕ್ಕೆ 2,500 ಕೋಟಿ ರೂ. ವಿಶೇಷ ಪ್ಯಾಕೇಜ್ ಅನ್ನು ಬಿಎಸ್‌ವೈ ಸರ್ಕಾರ ನೀಡಿದೆ. ಫಸಲ್ ಭಿಮಾ ಯೋಜನೆಯಡಿ 23 ಲಕ್ಷ ರೈತರಿಗೆ 24 ಲಕ್ಷ ಕೋಟಿ ರೂಪಾಯಿ ಜಮೆ ಆಗಿದೆ. ಬಿಜೆಪಿ ಕಾರ್ಯಕರ್ತರು ಜನರಿಗೆ ಈ ಯೋಜನೆಗಳ ಬಗ್ಗೆ ತಿಳಿಹೇಳುವ ಕೆಲಸ ಮಾಡಬೇಕು ಎಂದರು.