ರಾಯಚೂರು ಜಿಲ್ಲೆಯ 873 ಮತಗಟ್ಟೆಗಳಲ್ಲಿ ಮತದಾನ: ಹೀಗಿದೆ ಸದ್ಯದ ಸ್ಥಿತಿಗತಿ.. - Grama panchayat election news
ರಾಯಚೂರು ಜಿಲ್ಲೆಯಲ್ಲಿ ಮೊದಲ ಹಂತದ ನಾಲ್ಕು ತಾಲೂಕುಗಳ ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ ನಡೆಯುತ್ತಿದೆ. ದೇವದುರ್ಗ, ಸಿರವಾರ, ಮಾನವಿ, ರಾಯಚೂರು ತಾಲೂಕಿನ ವ್ಯಾಪ್ತಿಗೆ ಬರುವ 91 ಗ್ರಾ.ಪಂ ಗಳ 1,793 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮತದಾನಕ್ಕಾಗಿ 873 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 77 ಅತಿ ಸೂಕ್ಷ್ಮ, 156 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಇನ್ನುಳಿದ ಮತಗಟ್ಟೆಗಳು ಸಾಮಾನ್ಯ ಮತಗಟ್ಟೆಗಳಾಗಿವೆ. ಚುನಾವಣೆ ಮತದಾನ ಪ್ರಕ್ರಿಯೆಗಾಗಿ 2,244 ಸಿಬ್ಬಂದಿ ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.