ವಿಜೃಂಭಣೆಯಿಂದ ಜರುಗಿದ ಶ್ರೀ ಓಘಸಿದ್ದೇಶ್ವರ ಜಾತ್ರಾ ಮಹೋತ್ಸವ - ಶ್ರೀ ಓಘಸಿದ್ದೇಶ್ವರ ಸ್ವಾಮಿಯ ಜಾತ್ರೆ
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ಶ್ರೀ ಓಘಸಿದ್ದೇಶ್ವರ ಸ್ವಾಮಿಯ ಐದನೇ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಜಾತ್ರೆಯಲ್ಲಿ ಸುಮಾರು 10ಕ್ಕೂ ಹೆಚ್ಚು ದೇವರ ಪಲ್ಲಕ್ಕಿಗಳು ವಿಜೃಂಭಿಸಿದವು. ಜಾತ್ರಾ ಮಹೋತ್ಸವವನ್ನು ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧೆಡೆಯಿಂದ ಮಾತ್ರವಲ್ಲದೆ ನೆರೆಯ ಮಹಾರಾಷ್ಟ್ರ ಸೇರಿದಂತೆ ಹಲವೆಡೆಯಿಂದಲೂ ಭಕ್ತರು ಆಗಮಿಸಿದ್ದರು.