ಧರ್ಮೇಗೌಡರ ಮಗಳ ಮದುವೆಯಲ್ಲಿ ರಾಜಕೀಯ ನಾಯಕರ ದಂಡೇ ಭಾಗಿ - ಧರ್ಮೇಗೌಡರ ಮಗಳ ಮದುವೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ
ಚಿಕ್ಕಮಗಳೂರಿನಲ್ಲಿ ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡರ ಮಗಳ ಮದುವೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ದಂಪತಿ, ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಮಾಧುಸ್ವಾಮಿ, ವೈ.ಎಸ್.ವಿ.ದತ್ತ ಸೇರಿದಂತೆ ಹಲವು ರಾಜಕೀಯ ನಾಯಕರು ಭಾಗವಹಿಸಿದ್ದರು. ನಗರದ ಒಕ್ಕಲಿಗ ಸಮುದಾಯ ಭವನದಲ್ಲಿ ವಿವಾಹ ನಡೆಯುತ್ತಿದ್ದು, ಎಲ್ಲಾ ನಾಯಕರು ಆರತಕ್ಷತೆಯಲ್ಲಿ ಭಾಗವಹಿಸಿ, ನೂತನ ವಧು-ವರರಿಗೆ ಶುಭ ಹಾರೈಸಿದ್ದಾರೆ. ಇನ್ನು ಈ ಮದುವೆ ಕಾರ್ಯಕ್ರಮಕ್ಕೆ ಗಣ್ಯರ ದಂಡೇ ಹರಿದು ಬಂದಿದೆ.