ಪ್ರವೇಶ ಪರೀಕ್ಷೆ ಬಹಿಷ್ಕರಿಸಿ ಗುಲ್ಬರ್ಗಾ ವಿವಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ - ಎಂಫಿಲ್ ಹಾಗೂ ಪಿಎಚ್‌ಡಿ ಪ್ರವೇಶ ಪರೀಕ್ಷೆ
ಗುಲ್ಬರ್ಗಾ ವಿಶ್ವವಿದ್ಯಾಲಯ, ಕನ್ನಡ ಭಾಷೆ ಬಗ್ಗೆ ನಿರ್ಲಕ್ಷ್ಯ ಭಾವನೆ ತೋರಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂಫಿಲ್ ಹಾಗೂ ಪಿಎಚ್‌ಡಿ ಪ್ರವೇಶ ಪರೀಕ್ಷೆಗೆ ಆಂಗ್ಲ ಹಾಗೂ ಕನ್ನಡ ಭಾಷೆ ಎರಡರಲ್ಲೂ ಪ್ರಶ್ನೆ ಪತ್ರಿಕೆ ಮುದ್ರಣ ಮಾಡಬೇಕಾಗಿತ್ತು. ಆದರೆ ವಿವಿ ಕನ್ನಡ ಭಾಷೆಯನ್ನು ಕೈಬಿಟ್ಟು, ಕೇವಲ ಆಂಗ್ಲ ಭಾಷೆಯಲ್ಲಿ ಪ್ರವೇಶ ಪರೀಕ್ಷೆ ಮುದ್ರಣ ಮಾಡಿದೆ. ಇದರಿಂದಾಗಿ ಸಮಾಜಶಾಸ್ತ್ರ, ರಾಜ್ಯಶಾಸ್ತ್ರ ಸೇರಿದಂತೆ ವಿವಿಧ ಕೋಸ್೯ಗಳ ನೂರಾರು ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬಹಿಷ್ಕರಿಸಿ, ವಿವಿ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.