ಶ್ರಾವಣ ಸೋಮವಾರ... ಹುಟ್ಟೂರಿನ ಸೋಮೇಶ್ವರ ದೇವಾಲಯದಲ್ಲಿ ದೊಡ್ಡಗೌಡರಿಂದ ವಿಶೇಷ ಪೂಜೆ - ದೊಡ್ಡಗೌಡರು
ನಿನ್ನೆ ಶ್ರಾವಣ ಮಾಸದ ಕೊನೆಯ ಸೋಮವಾರವಾಗಿದ್ದರಿಂದ ಪ್ರತಿ ವರ್ಷದಂತೆ ಈ ಬಾರಿ ಕೂಡ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹುಟ್ಟೂರಾದ ಹಾಸನದ ಹರದನಹಳ್ಳಿಯ ಸೋಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬೆಂಗಳೂರಿನಿಂದ ನೇರವಾಗಿ ಸ್ವಗ್ರಾಮಕ್ಕೆ ಆಗಮಿಸಿದ ಗೌಡರು, ವಿಘ್ನೇಶ್ವರ, ಸುಬ್ರಹ್ಮಣ್ಯ, ಲಕ್ಷ್ಮೀ ದೇವಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ನಂತರ ಅರಕಲಗೂಡು ತಾಲೂಕಿನ ರಾಮನಾಥಪುರ ಹೋಬಳಿಯ ಬೂದನೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಲಕ್ಷ್ಮೇಶ್ವರ ಸ್ವಾಮಿ ದೇವಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದರು.