ಸೋಷಿಯಲ್ ಮೀಡಿಯಾಕ್ಕಷ್ಟೇ ಸಿಮೀತವಾದರೇ ಹೆಚ್ಡಿಕೆ? - ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಸುದ್ದಿ
ಬೆಂಗಳೂರು: ಉಪ ಚುನಾವಣೆಯಲ್ಲಿ ಭಾರಿ ಸೋಲಿನ ಬಳಿಕ ಸಾರ್ವಜನಿಕವಾಗಿ ಎಲ್ಲೂ ಕಾಣಿಸದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕೇವಲ ಸಾಮಾಜಿಕ ಜಾಲತಾಣಕ್ಕೆ ಸಿಮೀತವಾಗಿದ್ದಾರೆಯೇ ಎಂಬ ಪ್ರಶ್ನೆ ಎದ್ದಿದೆ. ಉಪ ಚುನಾವಣೆಯಲ್ಲಿ ಒಂದೂ ಕ್ಷೇತ್ರದಲ್ಲಿ ಗೆಲುವು ಕಾಣದೆ ಬೇಸರಗೊಂಡ ಕುಮಾರಸ್ವಾಮಿ, ಮೌನಕ್ಕೆ ಶರಣಾಗಿದ್ದರು. ಉಪ ಚುನಾವಣೆ ಫಲಿತಾಂಶದ ನಂತರ ಹೆಚ್ಡಿಕೆ ಸಾರ್ವಜನಿಕವಾಗಿ ಕಾಣಿಸದೆ ಕೇವಲ ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಸಿಎಂ ಆಗಿದ್ದಾಗ ಹಲವು ಯೋಜನೆಗಳ ಮೂಲಕ ರಾಜ್ಯದ ಜನರ ಗಮನ ಸೆಳೆದಿದ್ದ ಕುಮಾರಸ್ವಾಮಿ, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಮಾಡುವಲ್ಲಿ ಯಶಸ್ವಿಯಾಗುವರೇ ಎಂಬುದನ್ನು ಕಾದು ನೋಡಬೇಕು.