ಉಪ ಚುನಾವಣೆ ನಂತರ ರಾಜ್ಯದಲ್ಲಿ ಹೊಸ ಪರ್ವ: ಕುಮಾರಸ್ವಾಮಿ - ಉಪ ಚುನಾವಣೆ ಬಗ್ಗೆ ಕುಮಾರಸ್ವಾಮಿ ಮಾತು
ಮೈಸೂರು: 15 ಕ್ಷೇತ್ರಗಳಲ್ಲಿ ಜೆಡಿಎಸ್ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ. ಯಾವ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಈ ಚುನಾವಣೆ ಎಲ್ಲ ಪಕ್ಷಗಳಿಗೂ ಅಗ್ನಿ ಪರೀಕ್ಷೆಯಾಗಿದ್ದು, ಗೆಲುವು ಸಾಧಿಸಲು ಜೆಡಿಎಸ್ ತನ್ನದೇ ಅದ ರಾಜಕೀಯ ತಂತ್ರಗಾರಿಕೆ ರೂಪಿಸಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು, ಎಲ್ಲ ಕ್ಷೇತ್ರಗಳಲ್ಲಿ ಸ್ಥಳೀಯ ನಾಯಕರಿಗೆ ಅವಕಾಶ ನೀಡಲಾಗುವುದು, ಉಪ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ಹೊಸ ಪರ್ವ ಆರಂಭವಾಗಲಿದೆ ಎಂದು ಹೇಳಿದ್ದಾರೆ.