ಶೋಭಾ ಕರಂದ್ಲಾಜೆ ಅವರಿಗೆ ರೈತರು ಅಂದ್ರೆ ಗೊತ್ತಿದೆಯಾ: ಕುಮಾರಸ್ವಾಮಿ - ಬಿಜೆಪಿ ಹೆಸರಿನಲ್ಲಿ ರಾಜಕಾರಣ
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಹಾಮಳೆಗೆ ಪ್ರವಾಹ ಉಂಟಾಗಿ ತೋಟ ಕೊಚ್ಚಿ ಹೋದ ಇಬ್ಬರೂ ರೈತರು ಸರಿಯಾದ ಸಮಯಕ್ಕೆ ಸರ್ಕಾರದಿಂದ ಪರಿಹಾರ ಸಿಕ್ಕಿಲ್ಲ ಎಂದು ಆತ್ಮಹತ್ಯೆಗೆ ಶರಣಾಗಿದ್ದು, ಆ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿಲ್ಲ ಎಂದು ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.