ಜಿಮ್ ತರಬೇತುದಾರನಿಂದ ಕಿರುಕುಳ ಆರೋಪ: ವಿದ್ಯಾರ್ಥಿಗಳಿಂದ ಪ್ರತಿಭಟನೆ - ಜಿಮ್ ತರಬೇತುದಾರ
ಶಿವಮೊಗ್ಗ: ಜಿಮ್ ತರಬೇತುದಾರ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಇಂದು ಜಿಮ್ ಕೇಂದ್ರದ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಆ.28 ರಂದು ಜಿಮ್ ಮುಗಿಸಿಕೊಂಡು ಹಿಂತಿರುಗುವಾಗ ಜಿಮ್ ತರಬೇತುದಾರ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾನೆ. ಇದರಿಂದ ವಿದ್ಯಾರ್ಥಿನಿ ತೀವ್ರ ಮನನೊಂದಿದ್ದು, ಜಿಮ್ ತರಬೇತುದಾರನನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು. ಜಿಮ್ ಕೇಂದ್ರವನ್ನು ಮುಚ್ಚಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.