ಹಾಸನದಲ್ಲಿ ಉತ್ತಮ ಮಳೆ: ರೈತರ ಮೊಗದಲ್ಲಿ ಸಂತಸ - ಹಾಸನ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆ
ಹಾಸನ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮಧ್ಯಾಹ್ನ 2 ಗಂಟೆಗೆ ಮಳೆ ಬಂದಿದೆ. ಇದರಿಂದ ರೈತರು ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳನ್ನು ಆರಂಭಿಸಲು ಅನುಕೂಲವಾಗಿದೆ. ಬೆಳಗ್ಗೆಯಿಂದಲೇ ರೈತರು ಜಮೀನುಗಳಲ್ಲಿ ಉಳುಮೆ ಮಾಡಲು ಆರಂಭಿಸಿದ್ದು, ಅಲಸಂದಿ, ಎಳ್ಳು, ಹೆಸರು, ಉದ್ದು, ಬಿತ್ತನೆಗೆ ಮುಂದಾಗಿದ್ದಾರೆ. ಜೊತೆಗೆ ಕೃಷಿ ಚಟುವಟಿಕೆಗಳಿಗೆ ಅನುಕೂಲ ವಾಗುವಂತೆ ಸರ್ಕಾರ ಲಾಕ್ ಡೌನ್ ಸಡಿಲಗೊಳಿಸಿರುವುದರಿಂದ ರೈತರು ಬೀಜ, ಗೊಬ್ಬರ, ಔಷಧಗಳನ್ನು ಖರೀದಿಸುತ್ತಿದ್ದಾರೆ.