ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ: ಹಾವೇರಿ ಡಿಸಿಗೆ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ - ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ
ಹಾವೇರಿ: ಜಿಲ್ಲೆ ಸವಣೂರು ತಾಲೂಕಿನ ಹೊಸನೀರಲಗಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ್ ಗ್ರಾಮ ವಾಸ್ತವ್ಯ ಹೂಡಿದ್ದಾರೆ. ಜಿಲ್ಲಾಧಿಕಾರಿ ಆಗಮನ ಹಿನ್ನೆಲೆಯಲ್ಲಿ ಗ್ರಾಮವನ್ನು ಸಿಂಗರಿಸಲಾಗಿತ್ತು. ಗ್ರಾಮಕ್ಕೆ ಡಿಸಿ ಬರುತ್ತಿದ್ದಂತೆ ಗ್ರಾಮಸ್ಥರು ಪುಷ್ಪಾರ್ಚನೆ ಮಾಡಿ ಸ್ವಾಗತಿಸಿದರು. ಕುಂಭಹೊತ್ತ ಮಹಿಳೆಯರು ಜಿಲ್ಲಾಧಿಕಾರಿಗಳನ್ನ ಗ್ರಾಮಕ್ಕೆ ಕರೆತಂದರು. ಡಿಸಿ ಜೊತೆ ವಿವಿಧ ಅಧಿಕಾರಿಗಳು ಸಹ ಪಾಲ್ಗೊಂಡಿದ್ದರು.