ನಾಳೆ ಜನತಾ ಕರ್ಫ್ಯೂ ಹಿನ್ನೆಲೆ ಇಂದೇ ತರಕಾರಿ ಖರೀದಿಗೆ ಮುಗಿಬಿದ್ದ ಜನ.. - ಹಾವೇರಿ ಲಾಲ್ ಬಹದ್ದೂರ್ ಶಾಸ್ತ್ರಿ ಮಾರುಕಟ್ಟೆ
ಹಾವೇರಿ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ನಾಳೆ ಜನತಾ ಕರ್ಫ್ಯೂಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವುದರಿಂದ ಜನರು ಇಂದು ತರಕಾರಿ ಖರೀದಿ ಮಾಡುತ್ತಿದ್ದ ದೃಶ್ಯ ಹಾವೇರಿಯ ತರಕಾರಿ ಮಾರುಕಟ್ಟೆಯಲ್ಲಿ ಕಂಡು ಬಂದಿತು. ನಗರದ ಲಾಲ್ ಬಹದ್ದೂರ್ ಶಾಸ್ತ್ರಿ ಮಾರುಕಟ್ಟೆಯಲ್ಲಿ ನಗರ ಮತ್ತು ಹಳ್ಳಿಗಳಿಂದ ಬಂದ ಜನರು ನಾಳೆಗೆ ಬೇಕಾಗುವಷ್ಟು ತರಕಾರಿಯನ್ನು ಖರೀದಿ ಮಾಡಿದ್ರು.