ಹಾವೇರಿ ಶಾಸಕ ನೆಹರು ಓಲೇಕಾರ್ ಜನ್ಮದಿನ: ರಕ್ತದಾನ ಶಿಬಿರ - haveri blood donation camp latest news
ಹಾವೇರಿ ಶಾಸಕ ನೆಹರು ಓಲೇಕಾರ್ ಇಂದು 63ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ವಿಭಿನ್ನವಾಗಿ ಜನ್ಮ ದಿನಾಚರಣೆಯನ್ನು ಆಚರಿಸಿದ್ದಾರೆ. ಜನ್ಮ ದಿನಾಚರಣೆ ನಿಮಿತ್ತ ರಕ್ತದಾನ ಶಿಬಿರ ಏರ್ಪಡಿಸಿದ್ದರು. ವಿವಿಧ ಇಲಾಖೆಗಳ, ಸಂಘಗಳ ಸಂಯುಕ್ತಾಶ್ರಯದಲ್ಲಿ ನಡೆದ ಶಿಬಿರದಲ್ಲಿ ನೂರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ರಕ್ತದಾನ ಮಾಡಿದರು. ನೆಹರು ಓಲೇಕಾರ್ ಮಕ್ಕಳಾದ ದೇವರಾಜ್ ಮತ್ತು ಮಂಜುನಾಥ್ ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನ್ಮದಿನಾಚರಣೆಯನ್ನ ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಆಚರಿಸಿದ್ದು ನಮಗೆ ಬಹಳ ಖುಷಿಯಾಗಿದೆಯೆಂದು ಸಂತಸ ವ್ಯಕ್ತಪಡಿಸಿದರು.