ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್ ಧರಿಸಿ ತರಕಾರಿ ಖರೀದಿಸಿದ ಹಾವೇರಿ ಜನ - ಲಾಕ್ಡೌನ್ಗೆ ಉತ್ತಮ ಸ್ಪಂದನೆ
ಕೊರೊನಾ ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಇದಕ್ಕೆ ಹಾವೇರಿಯಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ನಗರದ ಮಾರುಕಟ್ಟೆಯಲ್ಲಿ ಜನರು ಸಾಮಾಜಿಕ ಅಂತರ ಕಾಯ್ದುಕೊಂಡೇ ತರಕಾರಿ ಖರೀದಿಸಿದರು. ರೈತರು ದಲ್ಲಾಳಿಗಳು ಮತ್ತು ತರಕಾರಿ ವರ್ತಕರು ಮಾಸ್ಕ ಧರಿಸಿ ವ್ಯಾಪಾರ ನಡೆಸಿದರು. ವಾಹನಗಳ ಸಂಚಾರ ವಿರಳವಾಗಿತ್ತು.