ಶಿವಮೊಗ್ಗ ಸ್ಫೋಟಕ್ಕೆ ಬೇಸರ ವ್ಯಕ್ತಪಡಿಸಿದ ಹೆಚ್ಡಿಕೆ - ಹೆಚ್ಡಿ ಕುಮಾರಸ್ವಾಮಿ
ರಾಮನಗರ: ಶಿವಮೊಗ್ಗದಲ್ಲಿ ನಡೆದ ಕಲ್ಲು ಗಣಿಗಾರಿಕೆ ದುರಂತ ನಿಜಕ್ಕೂ ಬೇಸರದ ವಿಚಾರ. ಇಂತಹ ಘಟನೆಗಳು ನಡೆಯಬಾರದು. ಅಲ್ಲಿ ಸಾವನ್ನಪ್ಪಿರುವ ಕಾರ್ಮಿಕರ ಕುಟುಂಬಕ್ಕೆ ನಾವು ಸಾಂತ್ವನ ಹೇಳಬಹುದು. ಆದರೆ ಅವರ ಜೀವಕ್ಕೆ ಬೆಲೆ ಕಟ್ಟಲು ಆಗಲ್ಲ. ಇಂತಹ ಘಟನೆಗಳು ನಡೆಯದಂತೆ ಸರ್ಕಾರ ಕ್ರಮ ವಹಿಸಬೇಕು ಎಂದು ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.