ಧಾರವಾಡ ಜಿಲ್ಲಾಸ್ಪತ್ರೆಗೆ ಆರೋಗ್ಯ ಸಚಿವ ಶ್ರೀರಾಮುಲು ಭೇಟಿ.. - ಜಿಲ್ಲಾಸ್ಪತ್ರೆಗೆ ಆರೋಗ್ಯ ಸಚಿವ ಶ್ರೀರಾಮುಲು ಭೇಟಿ
ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಇಂದು ಇಲ್ಲಿನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದರು. ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಕೋವಿಡ್-19 ಪರೀಕ್ಷೆಗಾಗಿ ಗಂಟಲು ದ್ರವ ತೆಗೆದುಕೊಳ್ಳುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ಇಲ್ಲಿ ಕೆಲಸ ಮಾಡುತ್ತಿರುವ ಆರೋಗ್ಯ ಸಿಬ್ಬಂದಿಯ ಯೋಗಕ್ಷೇಮ ವಿಚಾರಿಸಿದರು. ಆಸ್ಪತ್ರೆ ಸಿಬ್ಬಂದಿಯು ತಮ್ಮ ಸಮಸ್ಯೆಗಳನ್ನು ಸಚಿವರ ಹತ್ತಿರ ಹೇಳಿಕೊಂಡರು.