ಮಂಜಿನ ನಗರಿ ಕೊಡಗಿನಲ್ಲಿ ಗುಡುಗು ಸಹಿತ ಮಳೆ.. - ಕೊಡಗು ಮಡಿಕೇರಿಯಲ್ಲಿ ಮಳೆ
ಕೊಡಗು : ಮಂಜಿನ ನಗರಿ ಮಡಿಕೇರಿಯ ನಾಪೋಕ್ಲುವಿನಲ್ಲಿ ಗುಡುಗು ಸಹಿತ ಮಳೆಯಾಗಿದೆ. ಬಿಸಿಲಿನಿಂದಾಗಿ ಕಾಯ್ದು ಕಾವಲಿಯಂತಿದ್ದ ಇಳೆಗೆ ಮಳೆ ತಂಪೆರೆದಿದೆ. ಬೆಳಗ್ಗೆಯಿಂದ ಬಿಸಿಲಿನಿಂದಿದ್ರೆ ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವಿತ್ತು. ನಾಪೋಕ್ಲು, ಬ್ರಹ್ಮಗಿರಿ, ಭಾಗಮಂಡಲ, ತಲಕಾವೇರಿ ವ್ಯಾಪ್ತಿಯಲ್ಲಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಜೋರು ಮಳೆ ಸುರಿದಿದೆ. ವರ್ಷದ ಮೊದಲ ಹಬ್ಬ ಯುಗಾದಿ ಬಳಿಕ ವರುಣನ ಆಗಮನವಾಗಿರೋದು ಜಿಲ್ಲೆ ಜನತೆಯಲ್ಲಿ ಸಂತಸ ಮೂಡಿಸಿದೆ.