ಕರ್ನಾಟಕ

karnataka

ETV Bharat / videos

ಕಾಫಿನಾಡಲ್ಲಿ ಅಬ್ಬರಿಸಿ ಬೊಬ್ಬರಿಯುತ್ತಿರುಬವ ಮಳೆರಾಯ; ಜನರು ಕಂಗಾಲು - ಮಳೆಗೆ ಕಾಫಿ ಬೀಜ ನಾಶ

By

Published : Jan 9, 2021, 12:01 PM IST

Updated : Jan 9, 2021, 3:04 PM IST

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿದಿದ್ದು, ಮಲೆನಾಡಿಗರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಏಕಾಏಕಿ ಧಾರಾಕಾರವಾಗಿ ಸುರಿದ ಮಳೆಗೆ ಮನೆ ಮುಂದಿನ ಅಂಗಳದಲ್ಲಿ ಹಾಕಿದ್ದ ಕಾಫಿ ಬೀಜಗಳು ತರಗೆಲೆಯಂತೆ ಮಳೆ ನೀರಿನಲ್ಲಿ ಕೊಚ್ಚಿ ಹೋಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಸಾಮಾನ್ಯವಾಗಿದೆ. ಭಾರಿ ಮಳೆ - ಗಾಳಿಗೆ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿ-ಬೆಟ್ಟಗೆರೆ ರಸ್ತೆಯಲ್ಲಿ ವಿದ್ಯುತ್ ಕಂಬ ಧರೆಗುರುಳಿದ್ದು ಜನ ಕತ್ತಲಲ್ಲಿ ಬದುಕುವಂತಾಗಿದೆ. ಹುಣಸೇಹಳ್ಳಿ ಗ್ರಾಮದಲ್ಲಿ ರಸ್ತೆಯೇ ಕಾಣದಂತೆ ಮಳೆ ನೀರು ರಸ್ತೆ ಮೇಲೆ ನದಿಯಂತೆ ಹರಿದಿದೆ. ಇತ್ತ ಚಿಕ್ಕಮಗಳೂರು ನಗರದಲ್ಲಿ ಮಳೆ ಇಲ್ಲದಿದ್ದರೂ ಕಳೆದ ಎರಡ್ಮೂರು ದಿನಗಳಿಂದ ಸುರಿದ ಮಳೆ - ಗಾಳಿಯಿಂದ ತನ್ನ ಸಾಮರ್ಥ್ಯ ಕಳೆದುಕೊಂಡಿದ್ದ ಹಳೇ ಮರವೊಂದು ಕಾರಿನ ಮೇಲೆ ಬಿದ್ದು ಕಾರು ಸಂಪೂರ್ಣ ಜಖಂಗೊಂಡಿದೆ. ಇಂತಹ ಚಳಿಗಾಲದಲ್ಲೂ ಮಳೆಗಾಲದ ಮಳೆಯನ್ನೇ ನಾಚಿಸುವಂತೆ ಸುರಿಯುತ್ತಿರೋ ಮಳೆಯಿಂದ ಮಲೆನಾಡಿಗರು ಕಂಗಾಲಾಗಿದ್ದಾರೆ.
Last Updated : Jan 9, 2021, 3:04 PM IST

ABOUT THE AUTHOR

...view details