ಕರ್ನಾಟಕ

karnataka

ETV Bharat / videos

ಮಂಡ್ಯದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನತೆ: ಪ್ರತ್ಯಕ್ಷ ವರದಿ - ಮಂಡ್ಯ ಲೇಟೆಸ್ಟ್​ ಅಪ್ಡೇಟ್​ ನ್ಯೂಸ್​

By

Published : Jun 2, 2021, 9:34 AM IST

ಮಂಡ್ಯ: 2 ದಿನ ಸಂಪೂರ್ಣ ಲಾಕ್​​ಡೌನ್ ಬಳಿಕ ಅಗತ್ಯ ವಸ್ತುಗಳ ಖರೀದಿಗೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿರುವ ಹಿನ್ನೆಲೆ ಮಂಡ್ಯದ ಎಪಿಎಂಸಿ ಮಾರುಕಟ್ಟೆ ಜನಜಂಗುಳಿಯಿಂದ ಕೂಡಿದೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಜಿಲ್ಲಾಡಳಿತ ವಾರದಲ್ಲಿ 4 ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ಜಾರಿ ಮಾಡಿದೆ. ಈ ನಡುವೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಿರುವುದರಿಂದ ಸಾಮಾಜಿಕ ಅಂತರ ಮರೆತು ತರಕಾರಿ, ಹಣ್ಣು ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಕೆಲವರು ಮಾಸ್ಕ್​​ ಧರಿಸದೆ ಓಡಾಟ ನಡೆಸುತ್ತಿದ್ದರೂ ಜಿಲ್ಲಾಡಳಿತ ಕೈಚೆಲ್ಲಿ ಕುಳಿತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಹರಡುವ ಭೀತಿ ಎದುರಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

...view details