ಮೀನು-ಮಾಂಸ ಖರೀದಿಗೆ ಮುಗಿಬಿದ್ದ ಜನ: ಧ್ವನಿವರ್ಧಕಗಳ ಮೂಲಕ ಅಧಿಕಾರಿಗಳಿಂದ ಜಾಗೃತಿ
ಮಂಡ್ಯ: ಅಗತ್ಯ ವಸ್ತುಗಳ ಖರೀದಿ ಜತೆಗೆ ಮೀನು-ಮಾಂಸದಂಗಡಿಗಳ ಮುಂದೆ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಕಂಡುಬಂದರು. ಜನದಟ್ಟಣೆ ಕಡಿಮೆ ಮಾಡಿ, ಸೋಂಕು ನಿಯಂತ್ರಿಸಲು ಜಿಲ್ಲಾಡಳಿತ ಮುಂದಾಗಿದ್ದು, ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಬಂದ್ಗೆ ಈಗಾಗಲೇ ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ. ಹಾಗಾಗಿ ಅಗತ್ಯ ವಸ್ತುಗಳ ಖರೀದಿಗಾಗಿ ಹೆಚ್ಚಿನ ಜನರು ಹೊರಗೆ ಬಂದಿದ್ದರು. ಪ್ರಮುಖ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿತ್ತು. ಹಾಗಾಗಿ ರಸ್ತೆಗಳು ಜನಜಂಗುಳಿಯಿಂದ ಕೂಡಿವೆ. ಮನೆಯಿಂದ ಹೊರ ಬರುವ ಜನರನ್ನು ನಿಯಂತ್ರಿಸಲು, ನಿಯಮ ಪಾಲಿಸುವಂತೆ ಪೊಲೀಸ್ ಅಧಿಕಾರಿಗಳು ಹಾಗೂ ನಗರಸಭೆ ಸಿಬ್ಬಂದಿ ಧ್ವನಿವರ್ಧಕಗಳ ಮೂಲಕ ತಿಳಿಹೇಳುತ್ತಿದ್ದಾರೆ. ಈ ಸೂಚನೆಯ ಮೇರೆಗೆ ಕೆಲ ಮಾಂಸದಂಗಡಿ, ಸೂಪರ್ ಮಾರ್ಕೆಟ್ ಮುಂದೆ ಸರದಿ ಸಾಲಿನಲ್ಲಿ ನಿಂತು ಖರೀದಿ ಮಾಡುವ ಮೂಲಕ ಜನರು ಕೋವಿಡ್ ನಿಯಮ ಪಾಲನೆ ಮಾಡಿದರು. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.