ದ.ಕ ಜಿಲ್ಲೆಯಲ್ಲಿ ಬಿರುಸುಗೊಂಡ ಮಳೆ: ಜನಜೀವನ ಅಸ್ತವ್ಯಸ್ತ - D.K news
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮತ್ತೆ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಳೆದ ಒಂದು ವಾರದಿಂದ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಇಡೀ ದಿನವೂ ಮೋಡ ಕವಿದ ವಾತಾವರಣವಿದ್ದು, ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.