ಸುರಪುರದಲ್ಲಿ ಭಾರೀ ಮಳೆ: ಕೊಚ್ಚಿ ಹೋದ ಚಿಕ್ಕನಹಳ್ಳಿ ಹೆಬ್ಬಾಳ ರಸ್ತೆ - ಕೊಚ್ಚಿಹೋದ ಚಿಕ್ಕನಹಳ್ಳಿ ಹೆಬ್ಬಾಳ ರಸ್ತೆ
ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಸುರಪುರ ತಾಲೂಕಿನ ಚಿಕ್ಕನಹಳ್ಳಿ ಹೆಬ್ಬಾಳ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿ ರಸ್ತೆ ಸಂಚಾರ ಬಂದ್ ಆಗಿದೆ. ಅಲ್ಲದೆ ಭಾರೀ ಮಳೆಯಿಂದಾಗಿ ತಾಲೂಕಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ತಾಲೂಕಿನ ಬೋನಾಳ ಚಿಕ್ಕನಹಳ್ಳಿ ಮಾರ್ಗವಾಗಿ ಬೆನಕನಹಳ್ಳಿ ಮೂಲಕ ಹುಣಸಗಿ ಮುಖ್ಯ ರಸ್ತೆಗೆ ಕೂಡುವ ರಸ್ತೆ ಮಳೆಯಿಂದಾಗಿ ಸಂಪೂರ್ಣ ಕೊಚ್ಚಿ ಹೋಗಿದ್ದು, ಜನರು ಪ್ರಯಾಣಕ್ಕೆ ಪರದಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಮಳೆಯಿಂದ ಕೊಚ್ಚಿ ಹೋಗಿರುವ ರಸ್ತೆಯನ್ನು ತಾಲೂಕು ಆಡಳಿತ ಆದಷ್ಟು ಬೇಗ ನಿರ್ಮಿಸಿಕೊಡಬೇಕೆಂದು ಜನರು ಒತ್ತಾಯಿಸಿದ್ದಾರೆ.