ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ : ನೆರೆ ಭೀತಿಯಲ್ಲಿ ಭೇತ್ರಿ ಜನತೆ - ಕೊಡಗು ಜಿಲ್ಲೆಯಲ್ಲಿ ಪ್ರವಾಹ ಭೀತಿ
ಕೊಡಗು: ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಈಗಾಗಲೇ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶಗಳ ಜನರಲ್ಲಿ ಆತಂಕ ಪ್ರವಾಹದ ಭೀತಿ ಮನೆ ಮಾಡಿದೆ. ಕಳೆದ ವರ್ಷ ಕಾವೇರಿ ಮೈದುಂಬಿ ಹರಿದ ಪರಿಣಾಮ ಭೇತ್ರಿ ಬಳಿ ಸುಮಾರು 10 ಅಡಿ ಎತ್ತರದಲ್ಲಿ ನೀರು ಹರಿದು ಜನರಲ್ಲಿ ಆತಂಕವನ್ನು ಸೃಷ್ಟಿಸಿತ್ತು. ಈಗಾಗಲೇ ಬ್ರಹ್ಮಗಿರಿ ತಪ್ಪಲು, ತಲಕಾವೇರಿ, ನಾಪೋಕ್ಲು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕಾವೇರಿ ನದಿ ನೀರಿನ ಮಟ್ಟದಲ್ಲೂ ಹೆಚ್ಚಳವಾಗುತ್ತಿದೆ. ಒಂದು ವೇಳೆ ಮಳೆ ಹೀಗೆ ಮುಂದುವರೆದರೆ ಭೇತ್ರಿ ಮೇಲ್ಸೇತುವೆ ಬಂದ್ ಆಗಲಿದ್ದು, ಮಡಿಕೇರಿಯಿಂದ ವಿರಾಜಪೇಟೆ ತಾಲೂಕಿಗೆ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಆಗಲಿದೆ. ವಿರಾಜಪೇಟೆ ಪೊಲೀಸರು ಹಾಗೂ ತಾಲೂಕು ತಹಶೀಲ್ದಾರ್ ನಂದೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸೇತುವೆಗೆ ಎರಡೂ ಬದಿ ಬ್ಯಾರಿಕೇಡ್ ಅಳವಡಿಸಲು ಚಿಂತನೆ ನಡೆಸಿದ್ದಾರೆ. ಈ ಕುರಿತು ಪ್ರತ್ಯಕ್ಷ ವರದಿ ಇಲ್ಲಿದೆ....