ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ - ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಉಡುಪಿ ಜಿಲ್ಲೆಯಾದ್ಯಂತ ಮಳೆ ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಂಭವಿದೆ ಎಂದು ಅಂತರರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ಸೂಚನೆ ನೀಡಿದೆ. ಈಗಾಗಲೇ ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗ್ಗೆಯಿಂದಲೇ ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದ್ದು, ಕೆಲವು ಕಡೆ ಮೋಡ ಕವಿದ ವಾತಾವರಣವಿದೆ.