ಭಟ್ಕಳದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ - ಉತ್ತರ ಕನ್ನಡ ಜಿಲ್ಲೆಯ ಭಟ್ಕಳ
ಭಟ್ಕಳ: ಕೊರೊನಾ ಮಹಾಮಾರಿಯ ಅಬ್ಬರದ ನಡುವೆ ಮಳೆಯ ಆರ್ಭಟ ಜೋರಾಗಿದ್ದು, ತಾಲೂಕಿನಲ್ಲಿ ಕಳೆದ ಮೂರ್ನಾಲ್ಕು ದಿನದಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಲಾಕ್ಡೌನ್ ಸಡಿಲಿಕೆ ನಡುವೆ ಮಳೆಯಿಂದಾಗಿ ವ್ಯಾಪಾರ ವಹಿವಾಟು ನಡೆಸಲು ಸಮಸ್ಯೆ ಎದುರಿಸುವಂತಾಗಿದೆ. ಸಂಜೆ ಸುರಿದ ಭಾರೀ ಮಳೆಗೆ ಪ್ರಮುಖ ರಸ್ತೆಗಳಲ್ಲಿ ನೀರು ತುಂಬಿಕೊಂಡಿತ್ತು. ರಾಜ್ಯಕ್ಕೆ ಮುಂಗಾರು ಪ್ರವೇಶದ ಬೆನ್ನಲ್ಲೇ ತಾಲೂಕಿನ ರೈತರು ಹೊಲಗಳಲ್ಲಿ ನಾಟಿ ಕಾರ್ಯದಲ್ಲಿ ಮಗ್ನರಾಗಿದ್ದಾರೆ.