ವರುಣನ ಆರ್ಭಟಕ್ಕೆ ಬೀದರ್ ಜಿಲ್ಲೆಯಲ್ಲಿ ಜಲ ಅವಾಂತರ: ಪ್ರತ್ಯಕ್ಷ ವರದಿ
ಬೀದರ್ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಬಿರುಗಾಳಿ ಸಹಿತ ಭಾರಿ ಮಳೆಯಿಂದಾಗಿ ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ. ಸಾರ್ವಜನಿಕ ಸಂಚಾರ ಸ್ತಬ್ದವಾಗಿದೆ, ಸೇತುವೆಗಳು ಮುಳುಗಡೆಯಾಗಿವೆ, ರೈತರ ಜಮೀನುಗಳು ಜಲಾವೃತವಾಗಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ, ಕಬ್ಬು, ತೊಗರಿ ಹಾಗೂ ಸೋಯಾಬಿನ್ ಬೆಳೆಗಳು ಮಣ್ಣು ಪಾಲಾಗಿವೆ. ಮಾಂಜ್ರಾ ನದಿಯಲ್ಲಿ ನೀರಿನ ಹರಿವು ಅಪಾಯ ಮಟ್ಟದಲ್ಲಿದ್ದು, ನದಿ ತಟದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಜಿಲ್ಲೆಯಲ್ಲಿ ಅಲರ್ಟ್ ಆಗಿರುವಂತೆ ಅಧಿಕಾರಿಗಳಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಜಿಲ್ಲೆಯಲ್ಲಿ ಮಳೆ ಸೃಷ್ಟಿಸಿರುವ ಅವಾಂತರದ ಕುರಿತು ಈಟಿವಿ ಭಾರತ ಪ್ರತಿನಿಧಿ ಪ್ರತ್ಯಕ್ಷ ವರದಿ ನೀಡಿದ್ದಾರೆ.