ಧಾರಾಕಾರ ಮಳೆಗೆ ಹೈರಾಣಾದ ಮಲೆನಾಡ ಜನ... ಮತ್ತೆ ಮುಳುಗಡೆ ಭೀತಿಯಲ್ಲಿ ಹೆಬ್ಬಾಳೆ ಸೇತುವೆ! - ನದಿಗಳ ಹರಿವಿನ ಮಟ್ಟ
ಚಿಕ್ಕಮಗಳೂರಿನಲ್ಲಿ ಹಾಗೂ ಪಶ್ಚಿಮ ಘಟ್ಟಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಭದ್ರಾ ನದಿ ಮೈದುಂಬಿ ಹರಿಯುತ್ತಿದೆ. ಕಳಸದ ಬಳಿಯಿರುವ ಹೆಬ್ಬಾಳೆ ಸೇತುವೆ ಮುಳುಗಡೆ ಭೀತಿ ಎದುರಿಸುತ್ತಿದೆ. ಇದರಿಂದ ಕಳಸ-ಹೊರನಾಡು ಸಂಪರ್ಕ ಕಡಿತವಾಗುವ ಸಂಭವ ಹೆಚ್ಚಿದೆ. ಅಲ್ಲದೆ, ಮಲೆನಾಡಿನ ಕೆಲವು ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ನದಿಗಳಲ್ಲಿ ನೀರಿನ ಹರಿವಿನ ಮಟ್ಟದಲ್ಲೂ ಏರಿಕೆ ಕಂಡಿದೆ. ನಿರಂತರ ಮಳೆಯಿಂದಾಗಿ ಮಲೆನಾಡು ಭಾಗದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.