ಕೊರೊನಾ ಭೀತಿ ನಡುವೆಯೂ ಧಾರಾಕಾರ ಮಳೆ: ರೈತರ ಮೊಗದಲ್ಲಿ ಸಂತಸ - ಕೊರೊನಾ ಭೀತಿ ನಡುವೆಯೂ ಧಾರಾಕಾರ ಮಳೆ
ಚಿಕ್ಕಮಗಳೂರು: ಕೊರೊನಾ ವೈರಸ್ ಭೀತಿ ಹಾಗೂ ಲಾಕ್ಡೌನ್ ನಡುವೆಯೇ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಳೆದ14 ದಿನಗಳಿಂದ ರೇವತಿ ಮಳೆ ಧಾರಾಕಾರವಾಗಿ ಸುರಿಯಲು ಪ್ರಾರಂಭಿಸಿದೆ. ಕಳೆದ ಅರ್ಧ ಗಂಟೆಯಿಂದ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು, ಕಳಸ, ಶೃಂಗೇರಿ, ಕೊಪ್ಪ, ಕಡೂರು, ಅಜ್ಜಂಪುರ, ಸೇರಿದಂತೆ ಸುತ್ತ ಮುತ್ತ ಮಳೆ ಸುರಿಯುತ್ತಿದೆ. ಮಲೆನಾಡಿನ ಕೆಲ ಭಾಗದಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ.